ಧಾರವಾಡ: ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಕೃಷಿ ಮೇಳದಲ್ಲಿ ದುರಂತವೊಂದು ಸಂಭವಿಸಿದೆ. ಟ್ರ್ಯಾಕ್ಟರ್ ಮೈಮೇಲೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಪರಶುರಾಮ ಎಂ. (60) ಮೃತ ದುರ್ದೈವಿ. ಕೃಷಿ ಮೇಳದಲ್ಲಿ ಪ್ರದರ್ಶನಕ್ಕೆ ತಂದಿದ್ದ ಟ್ರ್ಯಾಕ್ಟರ್ ನ್ನು ಕ್ಯಾಂಟರ್ ಲಾರಿಯಿಂದ ಇಳಿಸುತ್ತಿದ್ದ ವೇಳೆ ವಕ್ತಿಯ ಮೇಲೆ ಟ್ರ್ಯಾಕ್ಟರ್ ಬಿದ್ದಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಅಜಾಗರೂಕತೆಯೇ ಘಟನೆಗೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.