HomeLatest NewsSHOCKING: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ಇಂಜಕ್ಷನ್ ಚುಚ್ಚಿ ಪರಾರಿಯಾದ ಆಗಂತುಕರು

SHOCKING: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ಇಂಜಕ್ಷನ್ ಚುಚ್ಚಿ ಪರಾರಿಯಾದ ಆಗಂತುಕರು

ಧಾರವಾಡ: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನನ್ನು ತಡೆದ ಆಗಂತುಕರು ವಿಳಾಸ ಕೇಳುವ ನೆಪದಲ್ಲಿ ಇಂಜಕ್ಷನ್ ಚುಚ್ಚಿ ಪರಾರುಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಮುಸುಕುಧಾರಿಗಳು ಎಸ್ಕೇಪ್ ಆಗಿದ್ದಾರೆ.

10 ವರ್ಷದ ಮಣಿಕಂಠ ಗಾಣಿಗೇರ ಎಂಬ ಬಾಲಕನಿಗೆ ಇಂಜೆಕ್ಷನ್ ಹಾಕಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಗಟ್ಟಿಯಾಗಿ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಪರಾರಿಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಕನಿಗೆ ಯಾವ ಇಂಜೆಕ್ಷನ್ ಹಾಕಿದ್ದಾರೆ ಎಂದು ಪೋಷಕರಲ್ಲಿ ಆತಂಕ ಉಂಟಾಗಿದ್ದು, ಈ ಘಟನೆ ಗ್ರಾಮಸ್ಥರನ್ನು ಕಂಗಾಲಾಗಿಸಿದೆ, ಅಲ್ಲದೇ ಮಕ್ಕಳನ್ನು ಹೊರಗೆ ಬಿಡಲು ಪೋಷಕರ ಹಿಂದೇಟು ಹಾಕುತ್ತಿದ್ದಾರೆ.

ಗ್ರಾಮಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular