BREAKING: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕಳ್ಳತನ; ಲಾಕರ್ ಒಡೆದು 1 ಕೋಟಿಗೂ ಅಧಿಕ ಹಣ ಕದ್ದೊಯ್ದ ಕಳ್ಳರು

ಧಾರವಾಡ: ವಿಜಯದಶಮಿ ಹಬ್ಬದ ದಿನವೇ ಕಳ್ಳರು ಕೈಚಳಕ ತೋರಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯ ಲಾಕರ್ ಒಡೆದು 1 ಕೋಟಿಗೂ ಅಧಿಕ ಹಣವನ್ನು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಹಬ್ಬದ ಹಿನ್ನೆಲೆಯಲ್ಲಿ ಬ್ಯಾಂಕ್ ರಜೆ ಇದ್ದ ಕಾರಣ ಲಾಕರ್ ನಲ್ಲಿ 1.24 ಕೋಟಿ ಹಣವಿತ್ತು ಎಂದು ಹೇಳಲಾಗುತ್ತಿದೆ. ಕಚೇರಿಯ ಶೌಚಾಲಯದ ಕಿಟಕಿ ಒಡೆದು ಒಳನುಗ್ಗಿರುವ ಕಳ್ಳರು 4 ಲಾಕರ್ ಗಳಲ್ಲಿದ್ದ ಕೋಟ್ಯಂತರ ರೂಪಾಯಿ ಹಣ ದೋಚಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read