ಸದ್ದಿಲ್ಲದೇ ಒಟಿಟಿಗೆ ಎಂಟ್ರಿ ಕೊಟ್ಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರ

ಎಪಿ ಅರ್ಜುನ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತನ್ನ ಟೀಸರ್ ಹಾಗೂ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿತ್ತು. ಸದ್ಯ, ಈ ಸಿನಿಮಾ ಒಟಿಟಿ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದೆ.

ಅ.11 ರಂದು ತೆರೆಕಂಡ ಮಾರ್ಟಿನ್ ಸಿನಿಮಾ ನಿರೀಕ್ಷೆಯಷ್ಟು ಯಶಸ್ಸು ಗಳಿಸಲಿಲ್ಲ. ಇದೀಗ ಸದ್ದಿಲ್ಲದೇ ಅಮೆಜಾನ್ ಪ್ರೈಮ್ ನಲ್ಲಿ ಸಿನಿಮಾ ರಿಲೀಸ್ ಆಗಿದೆ.

ಈ ಚಿತ್ರವನ್ನು ವಾಸವಿ ಎಂಟರ್ಪ್ರೈಸಸ್ ಬ್ಯಾನರ್ ನಲ್ಲಿ ಉದಯ್ ಕೆ ಮೆಹ್ತಾ ಮತ್ತು ಸೂರಜ್ ಉದಯ್ ಮೆಹ್ತಾ ನಿರ್ಮಾಣ ಮಾಡಿದ್ದು, ಧ್ರುವ ಸರ್ಜಾ ಅವರಿಗೆ ಜೋಡಿಯಾಗಿ ವೈಭವಿ ಶಾಂಡಿಲ್ಯ ಅಭಿನಯಿಸಿದ್ದಾರೆ.
ಇನ್ನುಳಿದಂತೆ ಅನ್ವೇಶಿ ಜೈನ್, ಜಾರ್ಜಿಯಾ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕಾ ಅವಿನಾಶ್, ಅಚ್ಯುತ್ ಕುಮಾರ್, ನಿಕಿತಿನ್ ಧೀರ್, ನವಾಬ್ ಷಾ, ರೋಹಿತ್ ಪಾಠಕ್, ನಾಥನ್ ಜೋನ್ಸ್, ರೂಬಿಲ್ ಮೂರ್ತಿ ಕೃಷ್ಣಾ ದಿಯಾಲಾಗ್ ಗೋಪಿ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಮಣಿ ಶರ್ಮಾ ಸಂಗೀತ ಸಂಯೋಜನೆ ನೀಡಿದ್ದು, ಕೆಎಮ್ ಪ್ರಕಾಶ್ ಸಂಕಲನ,ಇಮ್ರಾನ್ ಸರ್ಧಾರಿಯಾ ಹಾಗೂ ವಿ ಮುರಳಿ ಅವರ ನೃತ್ಯ ನಿರ್ದೇಶನ, ಗೋಪಿನಾಥ್ ಕೃಷ್ಣಮೂರ್ತಿ ಮತ್ತು ಎ.ಪಿ ಅರ್ಜುನ್ ಸಂಭಾಷಣೆ, ಸತ್ಯ ಹೆಗಡೆ ಛಾಯಾಗ್ರಹಣವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read