HomeEntertainmentಬಿಡುಗಡೆ ದಿನಾಂಕ ಘೋಷಣೆ ಮಾಡಿದ 'ಮಾರ್ಟಿನ್' ಚಿತ್ರತಂಡ

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಮಾರ್ಟಿನ್’ ಚಿತ್ರತಂಡ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಮಾರ್ಟಿನ್’ ಡಿಸೆಂಬರ್ 22ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಈ ಕುರಿತು ಚಿತ್ರತಂಡ ಇಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಧ್ರುವ ಸರ್ಜಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ತನ್ನ ಟೀಸರ್ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಎಪಿ ಅರ್ಜುನ್ ನಿರ್ದೇಶನದ ಈ ಚಿತ್ರದಲ್ಲಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ಸುಕೃತ ವಾಗ್ಲೆ, ಅಚ್ಯುತ್ ಕುಮಾರ್, ಅನ್ವೇಶಿ ಜೈನ್, ಚಿಕ್ಕಣ್ಣ, ಸಾಧುಕೋಕಿಲ, ಮಾಳ್ವಿಕಾ ಅವಿನಾಶ್ ಬಣ್ಣ ಹಚ್ಚಿದ್ದಾರೆ. ಉದಯ್ ಮೆಹ್ತಾ ತಮ್ಮ ವಾಸವಿ ಎಂಟರ್‌ಪ್ರೈಸಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಭಾರತದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular