ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದಿದೆ. ಭರ್ಜರಿ ಓಪನಿಂಗ್ ಪಡೆದುಕೊಂಡಿರುವ ‘ಧುರಂಧರ್ 2’ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿಗೆ ಸಮೀಪಿಸಿದೆ.
ಬಿಡುಗಡೆಯಾದಲ್ಲೆಲ್ಲ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಧುರಂಧರ್ 2’ ಸಿನಿಮಾ ಭಾರತ ಚಿತ್ರರಂಗದ ಇತಿಹಾಸದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಅಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್ ಪಾಲ್ ಸೇರಿದಂತೆ ಹಲವು ಪ್ರಮುಖರು ಚಿತ್ರದಲ್ಲಿದ್ದಾರೆ. ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಮತ್ತು ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಭಾರತದಿಂದ 172 ಕೋಟಿ ರೂ., ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆಯಾಗಿದ್ದು ಪ್ರೀಮಿಯರ್ ಶೋನಿಂದ 40 ಕೋಟಿ ಗಳಿಸಿದ್ದ ಸಿನಿಮಾ ಬಿಡುಗಡೆ ದಿನ ಹಿಂದಿಯಲ್ಲಿ 103 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಅತಿ ದೊಡ್ಡ ಓಪನಿಂಗ್ ಪಡೆದ ಹಿಂದಿ ಚಿತ್ರ ಎಂದು ಹೆಗ್ಗಳಿಕೆಗೆ ಪಾತ್ರವಾಗಿದೆ ಎನ್ನಲಾಗಿದೆ.

