ಬಾಡೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ. ರವಿ; ಫೋಟೊ ವೈರಲ್

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಈಗ ವಿವಾದವೊಂದಕ್ಕೆ ಸಿಲುಕಿದ್ದಾರೆ. ಮಾಂಸಹಾರ ಸೇವಿಸಿ ಅವರು ನಾಗಬನಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದ್ದು, ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ. ರವಿ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯಕ್ ಅವರ ಮನೆಯಲ್ಲಿ ಮಾಂಸಹಾರ ಸೇವನೆ ಮಾಡಿದ್ದರು. ಅದಾದ ಬಳಿಕ ಅವರು ಭಟ್ಕಳದಲ್ಲಿನ ನಾಗಬನ ಹಾಗೂ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಮೂರು ದಿನಗಳ ಹಿಂದೆ ಅಂದರೆ ಫೆಬ್ರವರಿ 19ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇದೀಗ ಕಾಂಗ್ರೆಸ್ ನಾಯಕರು ಇದೇ ವಿಷಯವನ್ನು ಇಟ್ಟುಕೊಂಡು ಸಿ.ಟಿ. ರವಿ ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಇನ್ನು ಈ ವಿಚಾರ ಕುರಿತಂತೆ ಸಿ.ಟಿ. ರವಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಶಾಸಕ ಸುನಿಲ್ ನಾಯಕ್ ಅವರ ಮನೆಯಲ್ಲಿ ಸಿ.ಟಿ. ರವಿ ಭೋಜನ ಸವಿಯುತ್ತಿರುವ ಹಾಗೂ ದೇಗುಲಕ್ಕೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read