HomeKarnatakaBIG NEWS: ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ: ಡಿ.ರೂಪಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ಗಾವಣೆ

BIG NEWS: ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ: ಡಿ.ರೂಪಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ಗಾವಣೆ

ಬೆಂಗಳೂರು: ಐಜಿಪಿ ಡಿ.ರೂಪಾ ವಿರುದ್ಧ ದಾಖಲೆ ಕಳುವು ಆರೋಪ ಮಾಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಐಜಿಪಿ ಡಿ.ರೂಪಾ ಕೆಳಹಂತದ ಅಧಿಕಾರಿಗಳನ್ನು ಬಳಸಿಕೊಂಡು ತನ್ನ ಕೊಠಡಿಯ ದಾಖಲೆಗಳನ್ನು ಕಳುವು ಮಾಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಆರ್ಪಿಸಿ ಡಿಐಜಿ ವರ್ತಿಕಾ ಕಟಿಯಾರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು. ಇದೀಗ ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ಸ್ ವಿಭಾಗಕ್ಕೆ ಡಿಐಜಿ ಹಾಗೂ ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular