ರಾಮನಗರ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವಂಚನೆಗಳು ನಡೆಯುತ್ತಿರುವ ಬಗ್ಗೆ ಎಷ್ಟೇ ಎಚ್ಚರಿಕೆ ನೀಡಿದರೂ ಮತ್ತೆ ಮತ್ತೆ ಜನರು ಮೋಸ ಹೋಗುತ್ತಿದ್ದು, ಬೆದರಿಕೆ ಕರೆಗಳಿಗೆ ಭಯಗೊಂಡು ಹಣ ಕಳೆದುಕೊಳ್ಳುತ್ತಿದ್ದಾರೆ.
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಬೆದರಿಕೆ ಹಾಕಿ ವಂಚಕರು ಲಕ್ಷ ಲಕ್ಷ ಹಣ ದೋಚಿದ್ದು, ಮನನೊಂದ ಬೆಸ್ಕಾಂ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೈಬರ್ ವಂಚಕರ ಕಿಉರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಗಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.
42 ವರ್ಷದ ಕುಮಾರ್ ಆತ್ಮಹತ್ಯೆಗೆ ಶರಣಾದ ಬೆಸ್ಕಾಂ ಸಿಬ್ಬಂದಿ. ಕುಮಾರ್ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಬೆಸ್ಕಾಂ ಸಿಬ್ಬಮ್ದಿಯಾಗಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ವಿಕ್ರಂ ಗೋಸ್ವಾಮಿ ಎಂಬಾತ ವಿಡಿಯೋ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡು ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿ ಕೇಸ್ ನಿಂದ ಕೈಬಿಡಲು ಅಕೌಂಟ್ ಗೆ ಹಣ ಹಾಕಬೇಕು ಎಂದು ಹೇಳಿ 11 ಲಕ್ಷ ಹಣ ತನ್ನ ಅಕೌಂಟ್ ಗೆ ಹಾಕಿಸಿಕೊಂಡಿದ್ದ. ಬಳಿಕ ಮತ್ತೆ ಕತ್ರೆ ಮಾಡಿ ಬೆದರಿಕೆ ಹಾಕಿದ್ದ. ಇದರಿಂದ ಬೇಸತ್ತು ಕುಮಾರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.