BIG NEWS : ರಾಜ್ಯದಲ್ಲಿ ಸ್ಟ್ಯಾಂಪ್’ ವಂಚನೆ, ಭದ್ರತಾ ಲೋಪ ತಡೆಗೆ ‘ಡಿಜಿಟಲ್ ಇ– ಸ್ಟ್ಯಾಂಪ್’ ವ್ಯವಸ್ಥೆ ಜಾರಿ : ಸಚಿವ ಕೃಷ್ಣಭೈರೇಗೌಡ

ಬೆಂಗಳೂರು : ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್‌’ ಬದಲಿಗೆ ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತೊಡೆದು ಹಾಕಲು ಈ ಹೊಸ ವ್ಯವಸ್ಥೆ ಪರಿಚಯಿಸಲಾಗಿದ್ದು, ಮುಂದಿನ ದಿನಗಳಲ್ಲಿ ‘ಡಿಜಿಟಲ್ ಇ-ಸ್ಟ್ಯಾಂಪ್‌’ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ  ತಿಳಿಸಿದ್ದಾರೆ.

ನಾಗರಿಕರು ಮಧ್ಯವರ್ತಿಗಳ ನೆರವಿಲ್ಲದೆ, ಮನೆಯಲ್ಲಿಯೇ ಕುಳಿತು ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ತಯಾರಿಸಿಕೊಳ್ಳಬಹುದು. ಇಂಟರ್‌ನೆಟ್‌ ಇದ್ದರೆ 24×7 ಜಗತ್ತಿನಲ್ಲಿ ಎಲ್ಲಿಯೇ ಕುಳಿತು ಈ ಸೇವೆಯನ್ನು ಪಡೆಯಬಹುದು. ಎಲ್ಲ ಸೇವೆಗಳು ಸಂಪೂರ್ಣ ಡಿಜಿಟಲ್ ಆಗಿರಲಿದೆ. ಸುರಕ್ಷಿತ ಮತ್ತು ವೇಗವಾಗಿ ಆನ್‌ಲೈನ್‌ ಪಾವತಿ ಮಾಡಲು ಕೂಡಾ ಅವಕಾಶವಿದೆ ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read