HomeKarnatakaಝೀಕಾ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ವೈರಾಣು ಪತ್ತೆಯಾಗಿಲ್ಲ

ಝೀಕಾ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ವೈರಾಣು ಪತ್ತೆಯಾಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಾಣು ಇದುವರೆಗೆ ಯಾವುದೇ ವ್ಯಕ್ತಿಯಲ್ಲಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ವೈರಾಣು ದೃಡಪಟ್ಟಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝೀಕಾ ವೈರಸ್ ಇರುವ ಬಗ್ಗೆ 10 ದಿನಗಳ ಹಿಂದೆಯೇ ಪ್ರಯೋಗಾಲಯ ವರದಿ ಬಂದಿದೆ. ಆ ಭಾಗದಲ್ಲಿ ಜ್ವರ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದವರ ಮಾದರಿಯನ್ನು ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ. ವೈರಾಣು ತಡೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular