HomeKarnatakaBREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ ಜೆಎನ್.1 ಇದೆ ಎಂದು ಗೊತ್ತಾಗಿ ಜಿನೋಮಿಕ್ ಸೀಕ್ವೆನ್ಸ್ ಗೆ ಕಳಿಸಿದ್ದು, ವರದಿ ಬಂದಿದೆ. ಬೆಂಗಳೂರಿನಲ್ಲಿ 20, ಮೈಸೂರಿನಲ್ಲಿ 4, ಮಂಡ್ಯ ಜಿಲ್ಲೆಯಲ್ಲಿ 3, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ, ರಾಮನಗರ, ಕೊಡಗು ಜಿಲ್ಲೆಯಲ್ಲಿ ತಲಾ ಒಂದು ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಜೆಎನ್.1 ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅವರು ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಬೇರೆ ಬೇರೆ ಕಾಯಿಲೆ ಜೊತೆಗೆ ಜೆಎನ್.1  ಸೋಂಕು ತಗುಲಿತ್ತು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular