ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ ತನಿಖೆ

ಬೆಂಗಳೂರು: ಕೋವಿಡ್ ಉಪಕರಣ ಖರೀದಿಯಲ್ಲಿ ಮೇಲ್ನೋಟಕ್ಕೆ ಅವ್ಯವಹಾರ ನಡೆದ ಸುಳಿವು ದೊರೆತಿದ್ದು, ತನಿಖೆ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರದೀಪ್ ಈಶ್ವರ್, ಕೊರೋನಾ ಅವ್ಯವಹಾರ ಕುರಿತು ಗಮನ ಸೆಳೆದ ವಿಚಾರಕ್ಕೆ ಸಚಿವರು ಉತ್ತರ ನೀಡಿದ್ದಾರೆ.

ಕೋವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಿಎಜಿ ವರದಿಯಲ್ಲಿ ಕೋವಿಡ್ ಉಪಕರಣ ಖರೀದಿ ಸೇರಿ ಇತರೆ ವಿಚಾರಗಳಲ್ಲಿ ಅಕ್ರಮ ನಡೆದ ಬಗ್ಗೆ ಉಲ್ಲೇಖವಾಗಿದೆ. ಕೆಲವು ಆರ್‌ಟಿಐ ಕಾರ್ಯಕರ್ತರು ಸಹ ಮಾಹಿತಿಗಳನ್ನು ಇಲಾಖೆಗೆ ಒದಗಿಸಿದ್ದು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ವರದಿ ಕೂಡ ಇದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಅವ್ಯವಹಾರಗಳ ಬಗ್ಗೆ ತನಿಖೆ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ.

ಅವ್ಯವಹಾರ ನಡೆದ ಹಿನ್ನಲೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ವರದಿಗಳನ್ನು ಅಧ್ಯಯನ ಮಾಡಿದ ನಂತರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read