HomeKarnatakaGOOD NEWS: ರಾಜ್ಯದಲ್ಲಿ 225 ವೈದ್ಯರ ನೇಮಕಕ್ಕೆ ಅನುಮೋದನೆ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

GOOD NEWS: ರಾಜ್ಯದಲ್ಲಿ 225 ವೈದ್ಯರ ನೇಮಕಕ್ಕೆ ಅನುಮೋದನೆ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಹುಬ್ಬಳ್ಳಿ: ರಾಜ್ಯದಲ್ಲಿ 225 ವೈದ್ಯರ ನೇಮಕಕ್ಕೆ ಅನುಮೋದನೆ ದೊರೆತಿದೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸರ್ಕಾರಿ ಆಸ್ಪತ್ರೆಗಳಲ್ಲಿ ಜೆನರಿಕ್ ಔಷಧಿ ಮಳಿಗೆ ಮುಂದುವರಿಯಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಔಷಧಿಗಳು ಮಾತ್ರ ಇರಬೇಕು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಕೆಲವರು ಕೋರ್ಟ್ ಗೆ ಹೋಗಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋವಿಡ್ ಸಮಯದಲ್ಲಿ ಹಗರಣದ ಬಗ್ಗೆ ನಿವೃತ್ತ ನ್ಯಾ.ಕುನ್ಹಾ ಸಮಿತಿ ವರದಿ ವಿಚಾರವಾಗಿ ಮಾತನಾಡಿದ ಸಚಿವರು, ಕುನ್ಹಾ ಸಮಿತಿ ವರದಿ ಆಧಾರದಲ್ಲಿ ತನಿಖೆ ನಡೆಯುತ್ತಿದೆ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ದುರುಪಯೋಗಗಳಾಗಿವೆ. ಆದರೆ ಸಾಕ್ಷಿ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular