ಡೆಂಗ್ಯೂಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹಬ್ಬಿಸುತ್ತಿದ್ದಾರೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ವಿಮಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಮಾಡಿ ಸಚಿವರನ್ನು ಟೀಕಿಸಿದ್ದ ಬಿಜೆಪಿ ನಾಯಕರ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಕೆಲಸವಿಲ್ಲ. ಆರೋಗ್ಯಕರ ಹವ್ಯಾಸವನ್ನು ಅನಗತ್ಯವಾಗಿ ಟೀಕಿಸುತ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸ್ವಿಮ್ಮಿಂಗ್ ಒಂದು ಉತ್ತಮ ಹವ್ಯಾಸ. ವಾಕಿಂಗ್, ಜಾಗಿಂಗ್ ರೀತಿ ಸ್ವಿಮ್ಮಿಂಗ್ ಕೂಡ ಆರೋಗ್ಯಕ್ಕೆ ಉತ್ತಮವಾದದ್ದು. ಬಿಜೆಪಿಯವರ ರೀತಿ ನಾನು ರೆಸಾರ್ಟ್ ಗೆ ಹೋಗಿ ಸ್ವಿಮ್ ಮಾಡಿಲ್ಲ. ಸ್ವಿಮ್ಮಿಂಗ ಬಳಿಕ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನನ್ನ ಕೆಲಸಗಳನ್ನು ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಬಿಜೆಪಿಯವರು ಸುಮ್ಮನೇ ಸುಳ್ಳು ಹಬ್ಬಿಸುತ್ತಿದ್ದಾರೆ. ಡೆಂಗ್ಯೂ ಸೊಳ್ಳೆಗಳಿಗಿಂತ ವೇಗವಾಗಿ ಬಿಜೆಪಿಯವರು ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯವರಿಗೆ ಯಾವಾಗಲೂ ಮೋಜು-ಮಸ್ತಿ ಎಂದು ಮಾತನಾಡಿ ಅಭ್ಯಾಸ ಇದೆ. ನಿನ್ನೆ ನೆಲಮಂಗಲದ ಬಳಿ ಜನರಿಗೆ ಮದ್ಯ, ಬಾಡೂಟ ಹಂಚಿದ್ದಾರಲ್ಲ. ಆ ರೀತಿ ನಾನೇನಾದರೂ ಮಾಡಿದ್ದೇನಾ? ಎಂದು ಪ್ರಶ್ನಿಸಿದರು. ಕಾರ್ಪೊರೇಷನ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಸ್ವಿಮ್ ಮಾಡಿದ್ದೇನೆ ತಪ್ಪೇನಿದೆ? ನಂತರ ಆಸ್ಪತ್ರೆಗಳಿಗೆ ಭೇಟಿ ಕೊಟ್ಟು ನನ್ನ ಕೆಲಸಗಳನ್ನು ಮಾಡಿದ್ದೇನೆ ಅದರಲ್ಲಿ ತಪ್ಪೇನಿದೆ? ಎಂದು ಗರಂ ಆದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read