BIG NEWS: ಶ್ರೀಕಾಂತ್ ಪೂಜಾರಿ ಮೇಲಿನ ರೌಡಿ ಶೀಟರ್ ಕೇಸ್ ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ; ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಹೆಸರಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಅನಗತ್ಯವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕರಸೇವಕ ಶ್ರೀಕಾಂತ್ ಪೂಜಾರಿ ಮೇಲಿನ ರೌಡಿಶೀಟರ್ ಕೇಸ್ ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು ಎಂದು ಹೇಳಿದರು.

ಬಿಜೆಪಿ ನಾಯಕರು ಸುಮ್ಮನೇ ಶ್ರೀಕಾಂತ್ ಪೂಜಾರಿ ಹೆಸರಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರದಿಂದ ನಮಗೆ ಬರಬೇಕಾದ ಜಿಎಸ್ ಟಿ ಬಂದಿಲ್ಲ ಆ ಹಣಕ್ಕಾಗಿ ಹೋರಾಟ ಮಾಡುವುದು ಬಿಟ್ಟು ಅನಗತ್ಯವಾಗಿ ರಾಜಕೀಯ ಉದ್ದೇಶಕ್ಕೆ ಹೋರಾಡುತ್ತಿದ್ದಾರೆ ಎಂದರು.

ಇದೇ ವೇಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗುತ್ತಿರುವುದು ಖುಷಿಯ ವಿಚಾರ. ಪ್ರತಿ ಗ್ರಾಮದಲ್ಲಿಯೂ ರಾಮ ಮಂದಿರವಿದೆ. ಹಿಂದುತ್ವ ಒಬ್ಬರ ಆಸ್ತಿಯಲ್ಲ, ಯಾವ ಪಕ್ಷದ ಆಸ್ತಿಯೂ ಅಲ್ಲ. ಅದಕ್ಕೆ ಹಲವು ವರ್ಷಗಳ ಇತಿಹಾಸವೇ ಇದೆ ಎಂದು ಹೇಳಿದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read