HomeKarnatakaBIG NEWS: ನಾವು ಯಾರನ್ನೂ ಕರೆದಿಲ್ಲ, ಅವರಾಗಿಯೇ ಕಾಂಗ್ರೆಸ್ ಗೆ ಮರಳಿ ಬರುತ್ತಿದ್ದಾರೆ ಎಂದ ಸಚಿವ...

BIG NEWS: ನಾವು ಯಾರನ್ನೂ ಕರೆದಿಲ್ಲ, ಅವರಾಗಿಯೇ ಕಾಂಗ್ರೆಸ್ ಗೆ ಮರಳಿ ಬರುತ್ತಿದ್ದಾರೆ ಎಂದ ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಬಿಜೆಪಿ ವಲಸೆ ಶಾಸಕರು ಮರಳಿ ಕಾಂಗ್ರೆಸ್ ಗೆ ವಾಪಸ್ ಆಗುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ದಿನೇಶ್ ಗುಂಡೂರಾವ್, ನಾವು ಯಾರನ್ನೂ ಆಹ್ವಾನಿಸಿಲ್ಲ, ಅವರಾಗಿಯೇ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾವು ಯಾರನ್ನೂ ಕರೆಯುತ್ತಿಲ್ಲ, ಆದರೆ ಬಿಜೆಪಿ ಹಗೂ ಜೆಡಿಎಸ್ ನ ಕೆಲವರು ಅವರಾಗಿಯೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ಅವರಾಗಿಯೇ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂಎಲ್ ಸಿ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿರುವ ವಿಚಾರವಾಗಿ ಮಾತನಾಡಿದ ಸಚಿವರು, ಯಾವ ಕರೆಯೂ ಬಂದಿಲ್ಲ ಎಂದು ಜಗದೀಶ್ ಶೆಟ್ಟರ್ ಅವರೇ ಹೇಳಿದ್ದಾರೆ. ಇನ್ನು ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular