ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ನೂತನ ಸಚಿವರ ಪಟ್ಟಿಯನ್ನು ರಾಜ್ಯಕ್ಕೆ ರವಾನಿಸಿದ್ದಾರೆ. ಕೆಲ ಹೊಸಬರ ಜೊತೆಗೆ ಹಳೆ ಮುಖಗಳಿಗೂ ಸ್ಥಾನ ನೀಡಲಾಗಿದೆ. ಆದರೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎರಡನೇ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ನನೇನೂ ಸಚಿವ ಸ್ಥಾನ ನಿರೀಕ್ಷೆ ಮಾಡಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕು ಎಂದು ಹೇಳಿದರು.
ಈಗಾಗಲೇ ನಾನು ಒಮ್ಮೆ ಸಚಿವನಾಗಿದ್ದೇನೆ. ಎಲ್ಲರಿಗೂ ಅವಕಾಶಗಳು ಸಿಗಬೇಕು. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಹೇಳಿಸರು.
ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಂಜೆ ನಾಲ್ಕು ಗಂಟೆಗೆ ರಾಜಭವದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

