HomeLive NewsBREAKING: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

BREAKING: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಹಾಗೂ ಸಚಿವ ಸಂಪುಟ ಪುನಾರಚನೆ ವಿಚಾರ ಭಾರಿ ಚರ್ಚೆಯಾಗುತ್ತಿರುವ ನಡುವೆಯೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಧಾರವಾಡಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು.

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಇಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ಭೇಟಿ ಮಾಡಿದ್ದು ಇಲಾಖೆ ಕೆಲಸದ ವಿಚಾರವಾಗಿ. ರಾಜ್ಯದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲು, ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲು ಹೊರತು ಬೇರೆ ಯಾವ ವಿಚಾರವಾಗಿ ಅಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಯಾವುದೇ ಬದಲಾವಣೆ ಚರ್ಚೆ ಇಲ್ಲ. ಯಾರಿಗೂ ಯಾವುದೇ ಡೆಡ್ ಲೈನ್ ಕೂಡ ಕೊಟ್ಟಿಲ್ಲ. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತೆ ಅದನ್ನು ಒಪ್ಪಿಕೊಳ್ಳುತ್ತೇವೆ. ಸಿಎಂ ಸೇರಿದಂತೆ ಎಲ್ಲರೂ ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಈ ಮುಲಕ ರಾಜ್ಯದಲ್ಲಿ ಮತ್ತೆ ಆರಂಭವಾಗಿದ್ದ ನಾಯಕತ್ವ ಬದಲಾವಣೆ ಚರ್ಚೆ ವಿಚಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆಯುವ ಯತ್ನ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular