ಬಿಜೆಪಿಯೊಂದಿಗೆ ‘ಜೆಡಿಎಸ್’ ವಿಲೀನ ಮಾಡಿಕೊಳ್ಳಲಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ. JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ ಎಂದು ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

https://twitter.com/dineshgrao/status/1680462209665896449

https://twitter.com/dineshgrao/status/1680462332256985088

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read