HomeKarnatakaBIG NEWS: ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ

BIG NEWS: ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದು ಯಾರೆಲ್ಲ ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿರುವಾಗಲೇ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು. ಆದರೆ ಈಗ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಶಿರಹಟ್ಟಿ ಮಠದ ಹಿರಿಯ ಪೀಠಾಧಿಪತಿ ಫಕ್ಕೀರ ಶಿವಯೋಗಿ ಸಿದ್ದರಾಮ ಶ್ರೀಗಳ ಸೂಚನೆ ಮೇರೆಗೆ ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಯಾರು ಏನೇ ಹೇಳಲಿ, ಪ್ರಧಾನಿಯೇ ಬಂದು ಹೇಳಿದರೂ ನಾಮಪತ್ರ ಹಿಂಪಡೆಯಲ್ಲ ಎಂದಿದ್ದ ಸ್ವಾಮೀಜಿ ಈಗ ಮನಸ್ಸು ಬದಲಿಸಿದ್ದು, ಸ್ವಾಮೀಜಿ ಮನವೊಲಿಸಿದ್ದು ಬಿಜೆಪಿನಾ? ಕಾಂಗ್ರೆಸ್ಸಾ? ಎಂಬ ಪ್ರಶ್ನೆ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular