ಮುಂಬೈ: ಕನ್ನಡದ ‘ಜ್ಯೂಲಿ’ ಖ್ಯಾತಿಯ ನಟ ಡಿನೋ ಮೋರಿಯಾ ಮನೆ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಮುಂಬೈನ ಮಿಥಿ ನದಿಯ ಹೂಳೆತ್ತುವ ಯೋಜನೆಯಲ್ಲಿ ಅಕ್ರಮ ನಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯ ಭಾಗವಾಗಿ ಅಧಿಕಾರಿಗಳು ಖ್ಯಾತ ನಟ ಡಿನೋ ಮೋರಿಯಾ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ 8 ಗಂಟೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಡಿನೋ ಮೋರಿಯಾ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಮಿಥಿ ನದಿಯ ಹೂಳು ತೆಗೆಯುವ ಯೋಜನೆಯಲ್ಲಿ 65 ಕೋಟಿ ರೂಪಾಯಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಈ ಮೊದಲು ಪೊಲೀಸರು ಡಿನೋ ಮೋರೊಯಾ ಅವರನ್ನು ವಿಚಾರಣೆ ನಡೆಸಿದ್ದರು.
ಪ್ರಕರಣದಲ್ಲಿ ಬಂಧಿತ ಆರೋಪಿ ಕೇತನ್ ಕದಮ್ ಹಾಗೂ ನಟ ಡಿನೋ ಮೋರಿಯಾ ನಡುವೆ ಹಣಕಾಸಿನ ವ್ಯವಹಾರಗಳು ನಡೆದಿವೆ. ಆರ್ಥಿಕ ಅಪರಾಧಗಳ ವಿಭಾಗ ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.