ಎಂಜಿನಿಯರಿಂಗ್ 3ನೇ ಸೆಮಿಸ್ಟರ್ ಗೆ ನೇರ ಪ್ರವೇಶ ಬಯಸುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ಆಪ್ಷನ್ಸ್ ದಾಖಲಿಸಲು ಆಗಸ್ಟ್ 17ರವರೆಗೆ ಅವಕಾಶ ನೀಡಲಾಗಿದೆ.
ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸೀಟು ಹಂಚಿಕೆಯ ಅಂತಿಮ ಸುತ್ತಿನ ಫಲಿತಾಂಶ ಪ್ರಕಟಿಸಲಾಗುತ್ತದೆ.
ಆ.17ರಿಂದ 19ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಆ.18ರಿಂದ 20ರವರೆಗೆ ಶುಲ್ಕ ಪಾವತಿಸಿ ಸೀಟು ಖಾತರಿ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು.
ಸೀಟು ಹಂಚಿಕೆಯಾದವರು ಆ.21ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
https://twitter.com/KEA_karnataka/status/2087530666770760043

