ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರು : ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆ ನೋಂದಣಿಗೆ ಡಿ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.

ಪದವಿ ಮುಗಿಸಿದವರಿಗೆ 3,000 ರೂ., ಡಿಪ್ಲೊಮಾ ಮಾಡಿದವರಿಗೆ 1500 ರೂ. ನಿರುದ್ಯೋಗ ಭತ್ಯ ನೀಡಲಾಗುತ್ತದೆ. ಪದವಿ ಮುಗಿಸಿ 6 ತಿಂಗಳ ನಂತರ ಯೋಜನೆಯನ್ನು ಪಲಾನುಭವಿಗಳಿಗೆ ಈ ಲಾಭ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು https://sevasindhugs.karnataka.gov.in/ ಲಾಗಿನ್ ಆಗಿ ಪೋರ್ಟಲ್‌ನಲ್ಲಿ ಅಧಾರ್ ಸಂಖ್ಯೆ ನಮೂದಿಸಿ ಒಟಿಪಿ ಪಡೆದು ಕೆವೈಸಿ ಮಾಹಿತಿ ಪಡೆದುಕೊಳ್ಳಬೇಕು. ಅಭ್ಯರ್ಥಿಗಳ ಅಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮೆ ಆಗಲಿದೆ.

ಸರ್ಕಾರಿ, ಅನುದಾನಿತ ಸಂಸ್ಥೆ, ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು ಮತ್ತು ಸ್ವಯಂ ಉದ್ಯೋಗ ಮಾಡುವ ಹಾಗೂ ವಿದ್ಯಾಭ್ಯಾಸ ಮುಂದುವರಿಸುವ ಅಭ್ಯರ್ಥಿಗಳು ಅರ್ಹರಾಗುವುದಿಲ್ಲ.

ಅಭ್ಯರ್ಥಿಗಳು ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರಗಳನ್ನು ಬಳಸಿ ಅರ್ಜಿ ಸಲ್ಲಿಸಬಹುದು.

https://sevasindhugs.karnataka.gov.in/ ಲಾಗಿನ್ ಆಗಿ ಪೋರ್ಟಲ್‌ನಲ್ಲಿ ಸಂಬಂಧಿಸಿದ ಎಲ್ಲ ದಾಖಲೆ ಸಲ್ಲಿಸಬೇಕು.

ಬೇಕಾಗುವ ದಾಖಲೆಗಳು

ಎಸ್‌ ಎಸ್‌ ಎಲ್‌ ಸಿ , ಪಿಯುಸಿ ಅಂಕಪಟ್ಟಿ,

ಸಿಇಟಿ ಸಂಖ್ಯೆ

ರೇಷನ್ ಕಾರ್ಡ್

ಪದವಿ ಅಥವಾ ತಾತ್ಕಾಲಿಕ ಪ್ರಮಾಣ ಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ಸಕ್ರಿಯವಾಗಿರುವ ಮೊಬೈಲ್ ಸಂಖ್ಯೆ, ಇಮೇಲ್ ದಾಖಲಿಸಿ ಒಟಿಪಿ ಪಡೆದುಕೊಳ್ಳಬೇಕು. ಸಮರ್ಪಕವಾಗಿ ಅರ್ಜಿ ಸಲ್ಲಿಸಿದ ಬಳಿಕ ಸ್ವೀಕೃತಿಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಸೇವಾ ಸಿಂಧು ಪೋರ್ಟ್‌ಲ್‌ನಲ್ಲಿ ನಿರುದ್ಯೋಗಿ ಸ್ಥಿತಿಯ ಬಗ್ಗೆ ಪ್ರತಿ ತಿಂಗಳ 25ರಂದು ಅಥವಾ ಮುಂಚಿತವಾಗಿ ಆಧಾರ್ ಒಟಿಪಿ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read