BIG NEWS : ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರ ಪ್ರವೇಶ : ಮುಜರಾಯಿ ಇಲಾಖೆ ಮಹತ್ವದ ನಿರ್ಧಾರ

ಬೆಂಗಳೂರು : ಮುಜರಾಯಿ ಇಲಾಖೆಗೊಳಪಡುವ ಎಲ್ಲಾ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರು ಕ್ಯೂ ನಿಲ್ಲುವ ಹಾಗಿಲ್ಲ, ಇದಕ್ಕಾಗಿ ದೇವಸ್ಥಾನಗಳಲ್ಲಿ ನೇರ ಪ್ರವೇಶ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ದೇವಸ್ಥಾನಗಳಲ್ಲಿ ವಯಸ್ಸಾದವರು ಬಹಳ ಹೊತ್ತು ಕ್ಯೂ ನಿಂತು ಹೋಗಲು ಸಾಧ್ಯವಿಲ್ಲ, 65 ವರ್ಷ ಆದವರಿಗೆ ಬಹಳ ಹೊತ್ತು ನಿಲ್ಲಲು ಆಗಲ್ಲ . ಆದ್ದರಿಂದ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ದೇವಸ್ಥಾನಗಳಲ್ಲಿ ಶುದ್ದ ಕುಡಿಯುವ ನೀರು ಹಾಗೂ ಸುಸಜ್ಜಿತ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read