HomeLatest NewsBREAKING : ಬೀಜಿಂಗ್ ಮತ್ತು ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಪುನಾರಂಭ.!

BREAKING : ಬೀಜಿಂಗ್ ಮತ್ತು ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಪುನಾರಂಭ.!

ನವದೆಹಲಿ   : ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಡಲಾಗಿದೆ. ಸುಮಾರು ನಾಲ್ಕು ವರ್ಷಗಳ ಬಿಕ್ಕಟ್ಟಿನ ನಂತರ, ಚೀನಾದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ‘ಏರ್ ಚೈನಾ’ (Air China) ಬೀಜಿಂಗ್ ಮತ್ತು ನವದೆಹಲಿ ನಡುವೆ ನೇರ ವಿಮಾನಯಾನ ಸೇವೆಯನ್ನು ಪುನರಾರಂಭಿಸುವುದಾಗಿ ಘೋಷಿಸಿದೆ.

ಹೌದು.  ನಾಲ್ಕು ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆಬಿದ್ದಿದ್ದು, ಭಾರತ ಮತ್ತು ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಹೊಸ ಆಶಾವಾದ ಮೂಡಿದೆ. ಗಡಿ ವಿವಾದದ ನಂತರ ಸ್ಥಗಿತಗೊಂಡಿದ್ದ ಬೀಜಿಂಗ್ ಮತ್ತು ನವದೆಹಲಿ ನಡುವಿನ ನೇರ ವಿಮಾನಯಾನ ಸೇವೆಯನ್ನು ಪುನರಾರಂಭಿಸುವುದಾಗಿ ‘ಏರ್ ಚೈನಾ’ ಘೋಷಿಸಿದ್ದು, ಇದು ಕೇವಲ ಪ್ರಯಾಣಿಕರ ಸಂಚಾರಕ್ಕಷ್ಟೇ ಅಲ್ಲದೆ, ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಪ್ರವಾಸೋದ್ಯಮದ ಪುನಶ್ಚೇತನಕ್ಕೆ ಭದ್ರ ಬುನಾದಿಯಾಗುವ ನಿರೀಕ್ಷೆಯಿದೆ.

ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರರಾದ ಯು ಜಿಂಗ್ ಅವರು ಈ ವಿಷಯವನ್ನು ದೃಢಪಡಿಸಿದ್ದು, ಈ ಕ್ರಮವು ದ್ವಿಪಕ್ಷೀಯ ಸಂಬಂಧಗಳನ್ನು ಸಹಜ ಸ್ಥಿತಿಗೆ ತರುವಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬೆಳವಣಿಗೆಯನ್ನು ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಮರುಸ್ಥಾಪಿಸುವ ಪ್ರಯತ್ನವೆಂದು ನೋಡಲಾಗುತ್ತಿದೆ.ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರರಾದ ಯು ಜಿಂಗ್ ಅವರು ಈ ವಿಷಯವನ್ನು ದೃಢಪಡಿಸಿದ್ದಾರೆ.

ವಕ್ತಾರರ ಮಾತು: ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, “ಏರ್ ಚೈನಾ ಬೀಜಿಂಗ್ ಮತ್ತು ದೆಹಲಿ ನಡುವೆ ನೇರ ವಿಮಾನಗಳನ್ನು ಪುನರಾರಂಭಿಸುತ್ತಿದೆ, ಇದು ಕೇವಲ ಪ್ರಯಾಣಕ್ಕಿಂತ ಹೆಚ್ಚಿನದನ್ನು ಸೂಚಿಸುತ್ತದೆ!” ಎಂದು ಬರೆದುಕೊಂಡಿದ್ದಾರೆ. ಈ ನೇರ ವಿಮಾನಯಾನದ ಪುನರಾರಂಭವು ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚಿನ ಚೈತನ್ಯ ನೀಡುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular