HomeKarnatakaಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಅವಕಾಶ: ಜ. 15 ರಂದು ನೇರ ಸಂದರ್ಶನ

ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಅವಕಾಶ: ಜ. 15 ರಂದು ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಫಿಜಿಷಿಯನ್-02, ಶಸ್ತ್ರಚಿಕಿತ್ಸಾ ತಜ್ಞರು-1, ಸ್ತ್ರೀರೋಗ ತಜ್ಞ-3, ಅರಿವಳಿಕೆ-9, ಇಎನ್‌ಟಿ-2, ನೇತ್ರ ತಜ್ಞರು-2, ಮಕ್ಕಳ ತಜ್ಞರು-2, ಕೀಲು ಮತ್ತು ಮೂಳೆ ತಜ್ಞರು-1, ರೇಡಿಯಾಲಜಿಸ್ಟ್ -1, ನೆಫ್ರೊಲಜಿಸ್ಟ್-1 ಒಟ್ಟು 24 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಒಂದು ವರ್ಷ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ದಿ: 15-01-2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08182 222382 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular