HomeKarnatakaJOB ALERT : ಮೇ 6 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

JOB ALERT : ಮೇ 6 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.06 ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಎಕ್ಸಿಸ್ ಬ್ಯಾಂಕ್ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular