HomeKarnatakaಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲು ನೇರ ಸಂದರ್ಶನ

ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ನೇಮಿಸಿಕೊಳ್ಳಲು ನೇರ ಸಂದರ್ಶನ

ಶಿವಮೊಗ್ಗ; ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯು ದಿನಾಂಕ 29-05-2026 ರಿಂದ 06-06-2026 ರವರೆಗೆ ಸಮಯ ಬೆಳಿಗ್ಗೆ 10.00 ಘಂಟೆಯಿAದ ಸಂಜೆ 05.00 ಘಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಿದೆ.

ಆಸಕ್ತ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಸೇನಾ ಸೇವಾ ನಿವೃತ್ತಿ ಪುಸ್ತಕಗಳೊಂದಿಗೆ ಪಿ.ಎಸ್ ರಮೇಶ್, ಉಪ ನಿರ್ದೇಶಕರು ಹಾಗೂ ಬಂದೀಖಾನೆಗಳ ಮುಖ್ಯ ಅಧೀಕ್ಷಕರು, ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಕಾಡೆಮಿ, ಕಾಳಿದಾಸ ರಸ್ತೆ, ಗಾಂದಿ ನಗರ, ಮಹಾ ಬೋಧಿ ಸೊಸೈಟಿಯ ಪಕ್ಕ, ಫ್ರೀಡಂ ಪಾರ್ಕ್, ಬೆಂಗಳೂರು, ಮೊಬೈಲ್ ಸಂಖ್ಯೆ 9632496560, 9480806400 ಇವರನ್ನು ಸಂಪರ್ಕಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಡಾ. ಎಸ್.ವಿ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕ್ರೀಡಾ ವಸತಿ ಶಾಲೆಗಳ ಪ್ರವೇಶಕ್ಕೆ ಜೂನ್ 01 ರಂದು ವಿಶೇಷ ಆಯ್ಕೆ ಪ್ರಕ್ರಿಯೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆಗೆ 2026-27ನೇ ಸಾಲಿನ 8ನೇ ತರಗತಿ ಹಾಗೂ ಪ್ರಥಮ ಪಿ.ಯು.ಸಿ. ಮಟ್ಟದ ಪ್ರವೇಶಾತಿಗಾಗಿ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ.

ಈಗಾಗಲೇ ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆಗಳು ನಡೆದಿದ್ದು, ವಿವಿಧ ಕಾರಣಗಳಿಂದ ಅದರಲ್ಲಿ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಉದ್ದೇಶದಿಂದ ರಾಜ್ಯದ ಕೆಲವು ಸ್ಥಳಗಳಲ್ಲಿ ಈ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಶಯ್ಕೆಯು ಎರಡು ಹಂತಗಳನ್ನು ಒಳಗೊಂಡಿದ್ದು, ತರಬೇತುದಾರರಿಂದ ಕ್ರೀಡಾವಾರು ಆಯ್ಕೆ ಪ್ರಕ್ರಿಯೆ ಹಾಗೂ ಕ್ರೀಡಾ ವಿಜ್ಞಾನ ಕೇಂದ್ರದಿಂದ ಕ್ರೀಡಾ ವೈಜ್ಞಾನಿಕ ಪರೀಕ್ಷೆ ಯನ್ನು ಜೂನ್ 1 ರಂದು ನಡೆಸಲಾಗುವುದು

ಅಥ್ಲೆಟಿಕ್ಸ್ ಜಿಲ್ಲಾ ಕ್ರೀಡಾಂಗಣ, ತುಮಕೂರು.

ಹಾಕಿ ಅಕ್ಕಿ ತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣ, ಬೆಂಗಳೂರು.ಕುಸ್ತಿ ಜಿಲ್ಲಾ ಕ್ರೀಡಾಂಗಣ, ಬೆಳಗಾವಿ. ವಾಲಿಬಾಲ್ ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಇಲ್ಲಿ ನಡೆಯಲಿದೆ.

ಪ್ರಮುಖ ನಿಯಮಗಳು

ಈ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ರಾಜ್ಯದ ಯಾವುದೇ ಭಾಗದ ಕ್ರೀಡಾಪಟುಗಳಿಗೆ ಮುಕ್ತ ಅವಕಾಶವಿರುತ್ತದೆ.2026-27ನೇ ಸಾಲಿನ ಪ್ರವೇಶಕ್ಕೆ ಈಗಾಗಲೇ ಆಯೋಜಿಸಲಾಗಿದ್ದ ಆಯ್ಕೆ ಪ್ರಕ್ರಿಯೆಗಳಲ್ಲಿ ಭಾಗವಹಿಸದ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದು.

ಒಂದು ವೇಳೆ ಈಗಾಗಲೇ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಆಯ್ಕೆಯಾಗದ ಅಭ್ಯರ್ಥಿಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಬಯಸಿದರೆ, ಈ ಬಗ್ಗೆ ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ದಾಖಲಿಸಿ ವಿಶೇಷ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular