2025-26ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಟಿಜಿಟಿ ವಿಜ್ಞಾನ, ಟಿಜಿಟಿ ಕಂಪ್ಯೂಟರ್ ವಿಜ್ಞಾನ, ಕುಕ್ ಮತ್ತು ಎಂಟಿಎಸ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಡಿಸೆಂಬರ್, 05 ರಂದು ಬೆಳಗ್ಗೆ 10.30 ಗಂಟೆಗೆ ಕೇಂದ್ರ ಸರ್ಕಾರದ ಶಿಕ್ಷಣ ನೇಮಕಾತಿಯ ಪ್ರಕಾರ, ಕಾರ್ಮಿಕ ಸಚಿವಾಲಯದ ಮಾನದಂಡಗಳ ಪ್ರಕಾರ ನೇರ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ 9611862835 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
