HomeKarnatakaJOB ALERT : ಕೊಪ್ಪಳದಲ್ಲಿ ಮೇ 5 ರಂದು ಟಾಟಾ ಮೋಟಾರ್ಸ್‌'ನಿಂದ ನೇರ ಸಂದರ್ಶನ :...

JOB ALERT : ಕೊಪ್ಪಳದಲ್ಲಿ ಮೇ 5 ರಂದು ಟಾಟಾ ಮೋಟಾರ್ಸ್‌’ನಿಂದ ನೇರ ಸಂದರ್ಶನ : ಉದ್ಯೋಗಾವಕಾಶ

ಕೊಪ್ಪಳ: ಧಾರವಾಡದ ಟಾಟಾ ಮೋಟಾರ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮೇ 5ರಂದು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತರು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಎರಡು ಪ್ರತಿಗಳು (Attested), ಆಧಾರ್ ಕಾರ್ಡ್, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಬಯೋಡಾಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನದ ವಿವರಗಳು:

  • ದಿನಾಂಕ ಮತ್ತು ಸಮಯ: ಮೇ 05, 2026 (ಮಂಗಳವಾರ), ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:30 ರವರೆಗೆ.
  • ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮೊದಲನೇ ಮಹಡಿ, ಜಿಲ್ಲಾ ಆಡಳಿತ ಭವನ, ಕೊಪ್ಪಳ.

ಅರ್ಹತೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಐಟಿಐ (ಎಲ್ಲಾ ಟ್ರೇಡ್‌ಗಳು), ಡಿಪ್ಲೊಮಾ ಅಥವಾ ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಭಾಗವಹಿಸಬಹುದು.
  • ವಯೋಮಿತಿ: 18 ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

ಅಗತ್ಯ ದಾಖಲೆಗಳು: ಆಸಕ್ತರು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಎರಡು ಪ್ರತಿಗಳು (Attested), ಆಧಾರ್ ಕಾರ್ಡ್, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಬಯೋಡಾಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ನೋಂದಣಿ: ಅಭ್ಯರ್ಥಿಗಳು ಮುಂಚಿತವಾಗಿ https://forms.gle/FfGRk1yakKtBEMaH8 ಲಿಂಕ್ ಮೂಲಕ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular