JOB ALERT : ವೈದ್ಯಾಧಿಕಾರಿಗಳ ಹುದ್ದೆಗೆ ನ.6 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ ನಿಗದಿ

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 8 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಷ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿಎಸ್ ಪದವೀಧರರಿಗೆ ನೇರ ಸಂದರ್ಶನವನ್ನು ಕರೆಯಲಾಗಿದೆ.

ಆಸಕ್ತರು ದಿ:06/11/2023 ರಂದು ಬೆಳಗ್ಗೆ 11.00 ರಿಂದ ಮ.1.00 ರವರೆಗೆ ಜಿಲ್ಳಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲಕ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read