ಬೆಂಗಳೂರು: ನೇರ ನೇಮಕಾತಿಗಾಗಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.
28-10-2024ರ ಬಳಿಕ ಯಾವುದೇ ಇಲಾಖೆ, ಮಂಡಳಿ, ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧಿಸಿದ ಪ್ರಾಧಿಕಾರಗಳು ಹೊರಡಿಸಿರುವ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಗಿದೆ.