BIG NEWS : ರಾಜ್ಯದ ‘ಸಿವಿಲ್ ‘ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಿರುವ ಪರಿಣಾಮವಾಗಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಪರಿಷ್ಕೃತ ಮೀಸಲಾತಿ ರೋಸ್ಟರನ್ನು ನಿಗದಿಪಡಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?
ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನಿಗದಿಪಡಿಸಲಾದ ಹೆಚ್ಚಿನ ಮೀಸಲಾತಿ ಪ್ರಮಾಣಕ್ಕೆ ಅನುಗುಣವಾಗಿ ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ರಿಕ್ತ ಸ್ಥಾನಗಳಿಗೆ ಸಂಬಂಧಿಸಿದಂತೆ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ 100 ರೋಸ್ಮರನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ.

ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ಮೀಸಲಾತಿಯನ್ನು ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪ್ರವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿದ 100 ಬಿಂದುಗಳ ಮೀಸಲಾತಿ ರೋಸ್ಮರಿನಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಪರಿಶಿಷ್ಟ ಜಾತಿಗಳಲ್ಲಿ ವರ್ಗೀಕರಿಸಿರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಪುನರ್ ವರ್ಗೀಕರಿಸುವ ಸಂದರ್ಭ ಒದಗಿ ಬಂದಿರುತ್ತದೆ ಅದರಂತೆ, ಈ ಕೆಳಕಂಡ ಆದೇಶ.

ಪರಿಶಿಷ್ಟ ಜಾತಿಗಳಲ್ಲಿರುವ 101 ಜಾತಿಗಳನ್ನು ಪ್ರವರ್ಗ-ಎ ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಗಳೆಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು, ಪ್ರವರ್ಗ-ಎ ರಲ್ಲಿನ ಸಮುದಾಯಗಳಿಗೆ ಶೇಕಡ 6. ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ಮತ್ತು ಪ್ರವರ್ಗ-ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ಮೀಸಲಾತಿಯನ್ನು ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿ ಆದೇಶಿಸಿರುವ ಹಿನ್ನೆಲೆಯಲ್ಲಿ ಮೇಲೆ (1) ರಲ್ಲಿ ಓದಲಾದ ದಿನಾಂಕ 28.12.2022 ರ ಸರ್ಕಾರದ ಆದೇಶದ ಅನುಬಂಧದಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿರುವ 17 ಬಿಂದುಗಳನ್ನು ಮಾತ್ರ ಈ ಆದೇಶದ ಅನುಬಂಧದಲ್ಲಿರುವಂತೆ ಪುನರ್ ವರ್ಗೀಕರಿಸಿ ಆದೇಶಿಸಲಾಗಿದೆ.

ಉಳಿದಂತೆ, ದಿನಾಂಕ 28.12.2022 ರ ಸರ್ಕಾರದ ಆದೇಶದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ. ಯಾವುದೇ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಯ ಪ್ರಕ್ರಿಯೆಯನ್ನು ದಿನಾಂಕ 28.12.2022 ರ ಸದರಿ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರನ್ನು ಅನುಸರಿಸಿ, ರಿಕ್ತಸ್ಥಾನಗಳನ್ನು ವರ್ಗೀಕರಣ ಮಾಡಿ ಈಗಾಗಲೇ ಪ್ರಾರಂಭಿಸಿದಲ್ಲಿ ರೋಸ್ಟರಿನ ಯಾವ ಬಿಂದುವಿನವರೆಗೆ ಜಾರಿಗೊಳಿಸಲಾಗಿದೆಯೋ, ಆ ನಂತರದ ರೋಸ್ಟರ್ ಬಿಂದುವಿನಿಂದ ಪ್ರಾರಂಭಿಸಿ, ಈ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ ರೋಸ್ಟರ್ ಬಿಂದುಗಳನ್ನು ಅನುಸರಿಸಿ ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳತಕ್ಕದ್ದು ಎಂದು ಆದೇಶಿಸಿದೆ.

    Share This Article

    Latest News

    ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

    View Results

    Loading ... Loading ...

    Most Read