HomeJobsಹೈಕೋರ್ಟ್ ನಲ್ಲಿ ವಿವಿಧ ಗ್ರೂಪ್-ಡಿ ಹುದ್ದೆಗಳಿಗೆ ನೇರ ನೇಮಕಾತಿ: ಇಲ್ಲಿದೆ ಮಾಹಿತಿ

ಹೈಕೋರ್ಟ್ ನಲ್ಲಿ ವಿವಿಧ ಗ್ರೂಪ್-ಡಿ ಹುದ್ದೆಗಳಿಗೆ ನೇರ ನೇಮಕಾತಿ: ಇಲ್ಲಿದೆ ಮಾಹಿತಿ

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳು ಅಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು- 101

ವಿದ್ಯಾರ್ಹತೆ- 10ನೇ/ತತ್ಸಮಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಕೊನೆಯ ದಿನ: 21 ಮೇ, 2026

ವಿವಿಧ ಗ್ರೂಪ್-ಡಿ ಹುದ್ದೆಗಳಿಗಾಗಿ ಅಭ್ಯರ್ಥಿಗಳ ನೇರ ನೇಮಕಾತಿ

(ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಲಿಫ್ಟ್ ಅಟೆಂಡ‌ರ್, ಸಹಾಯಕ ಬೈಂಡರ್, ದರ್ಜಿ, ಧೋಬಿ)

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು, ಇಲ್ಲಿ 93 ಗ್ರೂಪ್-ಡಿ(ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್), ಲಿಫ್ಟ್ ಅಟೆಂಡರ್, ಸಹಾಯಕ ಬೈಂಡರ್, ದರ್ಜಿ ಮತ್ತು ಧೋಬಿ) 1 ಉಳಿಕೆ ಹುದ್ದೆ (ಬ್ಯಾಕ್‌ ಲಾಗ್) ಸೇರಿದಂತೆ ಉಳಿದ ಮೂಲ ವೃಂದದ ಅಡಿಯಲ್ಲಿ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅಗತ್ಯ ಮತ್ತು ಇತರೆ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು https://judiciary.karnataka.gov.in ಮೂಲಕ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದೆಂದು ಅಧಿಸೂಚಿಸಲಾಗಿದೆ.

ಅರ್ಹತಾ ಮಾನದಂಡಗಳು:

ಎ) ವಿದ್ಯಾರ್ಹತೆ:

ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.

(i) ಜವಾನ, ಕಾವಲುಗಾರ, ಸ್ವೀಪರ್, ಜವಾನ (ಹೌಸ್ ಕೀಪಿಂಗ್): ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

(ii) ಲಿಫ್ಟ್ ಅಟೆಂಡರ್: ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಲಿಫ್ಟ್ ಮೆಕ್ಯಾನಿಸಂನಲ್ಲಿ ಅನುಭವವನ್ನು ಹೊಂದಿರಬೇಕು.

(iii) ಸಹಾಯಕ ಬೈಂಡರ್: ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಬೈಂಡಿಗ್ ಕೆಲಸದಲ್ಲಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು.

(iv) ದರ್ಜಿ: ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ದರ್ಜಿ ಕೆಲಸದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.

v) ಧೋಬಿ: ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಧೋಬಿ ಕೆಲಸದಲ್ಲಿ ಅನುಭವವನ್ನು ಹೊಂದಿರಬೇಕು.

ಬಿ) ವಯೋಮಿತಿ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು ಎಲ್ಲಾ ಪ್ರವರ್ಗದವರು ಕನಿಷ್ಠ 18 ವರ್ಷದವರಾಗಿರಬೇಕು ಮತ್ತು ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 40 ವರ್ಷ ನಿಗದಿಪಡಿಸಿದ್ದು, ಇತರೆ ಹಿಂದುಳಿದ ವರ್ಗ 43 ವರ್ಷ, ಪರಿಶಿಷ್ಟ ಜಾತಿ, ಪಂಗಡದವರಿಗೆ ವಯೋಮಿತಿ 45 ವರ್ಷ.

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ಉಲ್ಲೇಖಿಸಿರುವಂತೆ ಎಸ್‌ಬಿಐ ಆನ್‌ಲೈನ್ ಪಾವತಿ ಗೇಟ್‌ ವೇ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular