HomeKarnatakaSSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಎಸ್.ಎಲ್.ಸಿ., ಪಿಯುಸಿ, ಡಿಪ್ಲೊಮಾ, ಐಟಿಐ ಹಾಗೂ ಯಾವುದೇ ಪದವಿ ವಿದ್ಯಾರ್ಹತೆವುಳ್ಳ 18 ರಿಂದ 30 ವರ್ಷದೊಳಗಿನ ವಯೋಮಿತಿಯುಳ್ಳವರು ಸಂದರ್ಶನದಲ್ಲಿ ಭಾಗವಹಿಸಬಹುದು.

ಬಯೋಡಾಟಾ-5 ಪ್ರತಿ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಫೋಟೋಗಳು, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022459064, 8310785143 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular