ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಸರ್ಕಾರ ಎಲ್ಲಾ ಇಲಾಖೆ, ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಿದೆ.
ಇದರೊಂದಿಗೆ 9 ತಿಂಗಳ ನಂತರ ಸರ್ಕಾರಿ ರಾಜ್ಯದಲ್ಲಿ ನೇಮಕಾತಿ ಆರಂಭವಾಗಿದೆ, ನೇರ ನೇಮಕಾತಿಯಡಿ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿಸಲಾಗಿದ್ದು, ಒಳ ಮೀಸಲಾತಿ ಕಾರಣಕ್ಕೆ ಸ್ಥಗಿತವಾಗಿದ್ದ ಪ್ರಕ್ರಿಯೆ ಆರಂಭವಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪರಿಶಿಷ್ಟ ಜಾತಿಗಳಿಗೆ ಒಳಮಿಸಲಾತಿ ಅಳವಡಿಸಿಕೊಂಡು ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಿಗೆ ನೇಮಕ ನೇರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವಂತೆ ಸುತ್ತೋಲೆ ಹೊರಡಿಸಿದೆ.