BIG NEWS: ಕನ್ನಡ ಚಿತ್ರರಂಗ ಪ್ರತಿಭಾವಂತ ನಿರ್ದೇಶಕನನ್ನು ಕಳೆದುಕೊಂಡಿದೆ: ಗುರುಪ್ರಸಾದ್ ಅಗಲಿಕೆಗೆ HDK ಸಂತಾಪ

ರಾಮನಗರ: ನಿರ್ದೇಶಕ, ನಟ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ಕೇಳಿ ಬಹಳ ನೋವಾಗಿದೆ. ಕನ್ನಡ ಚಿತ್ರರಂಗ ಪ್ರತಿಭಾವಂತ ನಿರ್ದೇಶಕನನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿರ್ದೇಶಕ ಗುರುಪ್ರಸಾದ್ ಆತ್ಮಕ್ಕೆ ಶಾಂತಿಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದೆ. ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು ಆರ್ಥಿಕ ಸಂಕಷ್ಟ ಅಥವಾ ಯವುದೋ ಸಮಸ್ಯೆಗೆಸಿಲುಕಿ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ದುರಂತ. ಏನೇ ಸಮಸ್ಯೆಗಳಿದ್ದರೂ ಎಲ್ಲವನ್ನು ಧೈರ್ಯವಾಗಿ ಎದುರಿಸಬೇಕು. ಇಂತಹ ನಿರ್ಧಾರ ಸರಿಯಲ್ಲ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read