HomeEntertainmentಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ದೇಹದಿಂದ ಸಂಗ್ರಹಿಸಿದ ಕೆಲವು ಸ್ಯಾಂಪಲ್ ಗಳನ್ನು ಎಫ್ಎಸ್ಎಲ್ ಗೆ ರವಾನೆ ಮಾಡಲಾಗಿದೆ.

ಗುರುಪ್ರಸಾದ್ ಸಾವಿಗೆ ಮೊದಲು ಏನನ್ನಾದರೂ ಸೇವಿಸಿದ್ದರಾ? ನಿಖರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾವಾಗ ಎಂಬುದರ ಬಗ್ಗಯೂ ತನಿಖೆ ನಡೆಸಲಾಗಿದೆ. ಕೊಳೆತ ದೇಹದಿಂದ ಹರಿದಿರುವ ರಕ್ತದ ಬಗ್ಗೆ ಅನುಮಾನ ಹಿನ್ನೆಲೆಯಲ್ಲಿ ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಗೆ ರವಾನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲದ ಸುಳಿಯಲ್ಲಿ ಗುರುಪ್ರಸಾದ್ ಸಿಲುಕಿದ್ದರು. ಸಾವಿಗೆ ಕಿರುಕುಳ ಕಾರಣವೇ? ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಖಿನ್ನತೆ, ಸೋರಿಯಾಸಿಸ್ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆ ಮಾಡಲು ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular