ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿರ್ದೇಶಕ ಮುರಳಿ ಮೋಹನ್, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕಳೆದ 5-6 ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಹಣದ ಅಗತ್ಯವಿದೆ ಎಂದು ಹೇಳಿಕೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುರಳಿ ಮೋಹನ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಸಿನಿಮಾ ನಿರ್ದೇಶನ ಮಾಡಿದ್ದರು.