HomeEntertainmentBIG NEWS: ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ

BIG NEWS: ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ

ಬೆಂಗಳೂರು: ‘ಮೈನಾ’ ಸಿನಿಮಾ ಖ್ಯಾತಿಯ ನಿರ್ದೇಶಕ, ನಟ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ.

ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ ನೀಡಿದ್ದು, ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದೆ. ಹಾಗಾಗಿ ಕಾರು ಅಪಘಾತವಾಗಿದೆ ಎಂದು ತಿಳಿಸಿದ್ದಾರೆ.

ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಮಹಿಳೆಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಚಲಾಯಿಸುವಾಗ ಸ್ವಲ್ಪ ಕಣ್ಮುಚ್ಚಿದೆ, ಪರಿಣಾಮ ಆಕ್ಸಿಡೆಂಟ್ ಆಗಿದೆ. ಕಾರಿಗೆ ಡ್ಯಾಮೇಜ್ ಆಗಿದೆ ಅದನ್ನು ಬಿಟ್ಟರೆ ನನಗೇನೂ ತೊದರೆಯಾಗಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular