RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಬೆಳಗಾವಿ(ಸುವರ್ಣಸೌಧ): ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‌ಟಿಒ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡಿದ್ದಾರೆ.

ಆರ್‌ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ/ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.

ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದ್ದೇವೆ.

ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೇ ನೇರವಾಗಿ ಕಛೇರಿಯ ಅಧಿಕಾರಿ/ ಸಿಬ್ಬಂದಿಯವರನ್ನು ಭೇಟಿ ಮಾಡಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್‌ಟಿಒ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ.

ಲೋಕಾಯುಕ್ತರವರ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ವಿವರಗಳ ಮಾಹಿತಿಯನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದೆ. ದಿನಾಂಕ 01-11-2021 ರಿಂದ ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್ ಲೈನ್ ಮುಖಾಂತರ ಒದಗಿಸುತ್ತ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read