HomeKarnatakaಇಲಾಖಾ ವಿಚಾರಣೆ ನಡೆಸದೆ ನೌಕರನ ಸೇವೆಯಿಂದ ವಜಾ ಮಾಡುವುದು ಕಾನೂನುಬಾಹಿರ: ಹೈಕೋರ್ಟ್ ಮಹತ್ವದ ತೀರ್ಪು

ಇಲಾಖಾ ವಿಚಾರಣೆ ನಡೆಸದೆ ನೌಕರನ ಸೇವೆಯಿಂದ ವಜಾ ಮಾಡುವುದು ಕಾನೂನುಬಾಹಿರ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ನೌಕರನ ಮೇಲೆ ಗಂಭೀರ ಆರೋಪಗಳಿದ್ದರೂ ಸೂಕ್ತ ಇಲಾಖಾ ವಿಚಾರಣೆ ನಡೆಸದೆ ಮತ್ತು ಆತನ ವಾದವನ್ನು ಆಲಿಸದೇ ಸೇವೆಯಿಂದ ವಜಾ ಮಾಡುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಬಗ್ಗೆ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಬೆಳಗಾವಿಯ ಗೋಕಾಕ್ ತಾಲೂಕಿನ ಸಂಜು ಕುಮಾರ್ ನಿಗಮದ ನೌಕರರಾಗಿದ್ದ ತಂದೆಯ ನಿಧನದ ನಂತರ ಅನುಕಂಪದ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ನೇಮಕವಾಗಿದ್ದರು. ಕೆಲಸಕ್ಕೆ ಸೇರುವಾಗ ನಕಲಿ ಶೈಕ್ಷಣಿಕ ದಾಖಲೆ ನೀಡಿದ್ದಾರೆ ಎನ್ನುವ ಆರೋಪದ ಮೇಲೆ ಅವರನ್ನು 2024ರ ಡಿಸೆಂಬರ್ 13 ರಂದು ಸೇವೆಯಿಂದ ವಜಗೊಳಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ, ನೌಕರರ ಮೇಲೆ ನಕಲಿ ದಾಖಲೆ ನೀಡಿದ ಆರೋಪವಿದ್ದಾಗ ಅದು ಆತನ ವ್ಯಕ್ತಿತ್ವಕ್ಕೆ ಕಳಂಕ ತರುವಂತದ್ದಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಇಲಾಖಾ ವಿಚಾರಣೆ ನಡೆಸುವುದು ಮತ್ತು ನೌಕರನಿಗೆ ತನ್ನ ವಾದ ಮಂಡಿಸಲು ಅವಕಾಶ ನೀಡುವುದು ಕಡ್ಡಾಯವೆಂದು ಹೇಳಿದೆ.

ಪ್ರೊಬೇಷನರಿ ಅವಧಿಯಲ್ಲಿದ್ದರೂ ಆತನ ವಜಾ ಆದೇಶವು ಶಿಕ್ಷಾ ರೂಪದಲ್ಲಿದ್ದರೆ ಅದಕ್ಕೆ ಮೊದಲು ವಿಚಾರಣೆ ನಡೆಸಲೇಬೇಕು ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿದಾರರ ವಜಾ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್ ತಕ್ಷಣವೇ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ನಿಗಮಕ್ಕೆ ನಿರ್ದೇಶನ ನೀಡಿದೆ. ಇಲಾಖಾ ವಿಚಾರಣೆ ನಡೆಸಿ ಪ್ರಕರಣವನ್ನು ಕಾನೂನು ಬದ್ಧವಾಗಿ ನಿರ್ಧರಿಸುವ ಸ್ವಾತಂತ್ರ್ಯ ನಿಗಮಕ್ಕೆ ಇದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular