HomeKarnatakaಲೋಕಸಭಾ ಚುನಾವಣೆ: ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ

ಲೋಕಸಭಾ ಚುನಾವಣೆ: ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ

ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ‌ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ನಗರದ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಉಗ್ರಾಣದಲ್ಲಿರುವ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಮಂಗಳವಾರ ಬಿಗಿಭದ್ರತೆಯೊಂದಿಗೆ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕಳುಹಿಸಲಾಯಿತು.

ರ್ಯಾಂಡಮೈಜೇಷನ್ ಪ್ರಕ್ರಿಯೆಯಲ್ಲಿ ಹಂಚಿಕೆಗೊಂಡಿರುವ ಮತಯಂತ್ರಗಳನ್ನು ಜಿಪಿಎಸ್ ಆಧಾರಿತ ವಾಹನಗಳ ಮೂಲಕ ಪೊಲೀಸ್ ಭದ್ರತೆಯೊಂದಿಗೆ ರವಾನೆ‌ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯಾ ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಮ್ ಗಳಲ್ಲಿ ಇವಿಎಂ ಇರಿಸಲಾಗುತ್ತದೆ. ಎರಡನೇ ಚುನಾವಣಾ ವೀಕ್ಷಕರು ಆಗಮಿಸಿದ ಬಳಿಕ ಅವರ ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎರಡನೇ ಹಂತದ ರ್ಯಾಂಡಮೈಜೇಷನ್ ಮಾಡಲಾಗುವುದು.

ಎರಡನೇ ಹಂತದ ರ್ಯಾಂಡಮೈಜೇಷನ್ ಆದ ಬಳಿಕವೇ ಯಾವ ಮತಗಟ್ಟೆಗೆ ಯಾವ ಇವಿಎಂ ಹೋಗಲಿದೆ ಎಂಬುದು ಗೊತ್ತಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಎಲೆಕ್ಟ್ರಾನಿಕ್ ಮತಯಂತ್ರಗಳ ಪ್ರಾಥಮಿಕ ಹಂತದ ಪರಿಶೀಲನೆ(ಎಫ್.ಎಲ್.ಸಿ) ನಡೆಸಿ ಉಗ್ರಾಣದಲ್ಲಿ ಇಡಲಾಗುತ್ತದೆ. ಹೀಗೆ ಎಫ್.ಎಲ್.ಸಿ. ಮಾಡಲಾಗಿರುವ ಮತಯಂತ್ರಗಳನ್ನು ಪ್ರಥಮ ಹಂತದ ರ್ಯಾಂಡಮೈಜೇಷನ್ ಪ್ರಕ್ರಿಯೆ ಮೂಲಕ ಆಯಾ‌ ಮತಕ್ಷೇತ್ರಗಳಿಗೆ ಅಗತ್ಯಾನುಸಾರ ಶೇ.130 ರಷ್ಟು ಇವಿಎಂ ಹಂಚಿಕೆ ಮಾಡಲಾಗಿರುತ್ತದೆ ಎಂದು ವಿವರಿಸಿದರು.

ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ಚದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೇರಿದಂತೆ ಜಿಲ್ಲೆಯ ಎಲ್ಲ 18 ವಿಧಾನಸಭಾ ಕ್ಷೇತ್ರಗಳ ಸಹಾಯಕ‌ ಚುನಾವಣಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ಇವಿಎಂ ರವಾನೆ ಕಾರ್ಯದ ಉಸ್ತುವಾರಿ ವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular