HomeLatest Newsನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು ಪ್ರತಿ ದಿನ ಸುಮಾರು 5,600 ಮೆ.ಟನ್ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ ಘನತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಧೀರಜ್ ಮುನಿರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಉತ್ತರ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ 2 ದಿಕ್ಕುಗಳಲ್ಲಿ (ಉತ್ತರ ಮತ್ತ ದಕ್ಷಿಣ) ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಹಸಿ ತ್ಯಾಜ್ಯದ ಬಯೋ ಮಿಥಿನೇಷನ್‌ನಿಂದ ಅನಿಲ ಉತ್ಪಾದನೆ, ಗೊಬ್ಬರ ತಯಾರಿಕೆ, ಒಣತ್ಯಾಜ್ಯದ ಮರುಬಳಕೆ ಮತ್ತು ವಿದ್ಯುತ್ ಉತ್ಪಾದನೆ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ಕೀಟ (Black Soldier Fly) ಕಸವನ್ನು ತಿಂದು ಗೊಬ್ಬರವಾಗುವ ಬಗ್ಗೆ ವರದಿಯಾಗಿರುತ್ತದೆ. ಈ ಬಗ್ಗೆ ಸಮೀಕ್ಷೆ ನಡೆಸಿ ಅದನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಯೋಚಿಸಲಾಗುತ್ತಿದೆ. ಇದಲ್ಲದೇ ಇನ್ನೂ 2-3 ಪ್ರಯೋಗಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ಒಟ್ಟಾರೆಯಾಗಿ ಜನ ಸಾಮಾನ್ಯರ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದಂತೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular