HomeKarnatakaBREAKING NEWS: ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟ: ಮೌಲ್ಯಮಾಪನಕ್ಕೆ ಶಾಸಕ ಒತ್ತಾಯ

BREAKING NEWS: ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟ: ಮೌಲ್ಯಮಾಪನಕ್ಕೆ ಶಾಸಕ ಒತ್ತಾಯ

ಚಿಕ್ಕಮಗಳೂರು: ರಾಜ್ಯದ ಕೆಲ ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟಗೊಂಡಿದೆ.

ಚಿಕ್ಕಮಗಳೂರಿನಲ್ಲಿ ಕಡೂರು ಶಾಸಕ ಆನಂದ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಕೆಲವು ಸಚಿವರ ವಿರುದ್ಧ ನಮ್ಮ ಶಾಸಕರಲ್ಲಿ ಅಸಮಾಧಾನ ಇದೆ. ಸಚಿವರು ಯಾವುದೇ ಕೆಲಸ ಮಾಡುತ್ತಿಲ್ಲ ಎನ್ನುವ ಅಪಸ್ವರ ಇದೆ ಎಂದು ಹೇಳಿದ್ದಾರೆ.

ನಾಲ್ವರು ಸಚಿವರು ವಿರುದ್ಧ ರಾಜ್ಯದ ಜನರಲ್ಲಿಯೂ ಅಸಮಾಧಾನ ಇದೆ. ಕೆಲವು ಸಚಿವರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸಚಿವರ ಕಾರ್ಯವೈಖರಿಯ ಮೌಲ್ಯಮಾಪನ ಮಾಡಬೇಕು. ಶಾಸಕರಿಂದ ಮೌಲ್ಯಮಾಪನ ಮಾಡಿ ಅಭಿಪ್ರಾಯ ಸಂಗ್ರಹಿಸಲಿ ಎಂದು ಪಕ್ಷದ ಹೈಕಮಾಂಡ್ ಗೆ ಕಾಂಗ್ರೆಸ್ ಶಾಸಕ ಆನಂದ್ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular