HomeKarnatakaರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗುಡುಗು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು ಬಿರುಗಾಳಿ ಸಹಿತ ಮಳೆ ಆಗಲಿದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸಲಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದೆ. ಧಾರವಾಡ, ಗದಗ, ಬೀದರ್, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ವೇಗದ ಗಾಳಿ ಬೀಸಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular