ದುನಿಯಾ ಡಿಜಿಟಲ್ ಡೆಸ್ಕ್ : ಕರೂರು ಕಾಲ್ತುಳಿತ ದುರಂತದಿಂದ ಮನನೊಂದು ನಟ ವಿಜಯ್ ಪಕ್ಷದ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಟಿವಿಕೆ ಪಕ್ಷದ ವಿರ್ಪಟ್ಟು ಗ್ರಾಮದ ಕಾರ್ಯದರ್ಶಿ ಅಯ್ಯಪ್ಪನ್ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಕಾಲ್ತುಳಿತ ದುರಂತದಿಂದ ಮನನೊಂದು ನೇಣಿಗೆ ಶರಣಾಗುತ್ತಿದ್ದೇನೆ ಎಂದು ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕರೂರಿನಲ್ಲಿ ನಟ ವಿಜಯ್ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.