HomeKarnatakaಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್

ಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಇಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಕಾರ್ಯಕರ್ತರ ಸಮಾವೇಶ ನಡೆಸಿದ್ದಾರೆ.

ಸಮಾವೇಶದಲ್ಲಿ ಕಾರ್ಯಕರ್ತರಿಗೆ ನೀಡಲು ಬಿರಿಯಾನಿ ಸಿದ್ಧಪಡಿಸಲಾಗುತ್ತಿದ್ದು, ಮಾಹಿತಿ ಪಡೆದ ಚುನಾವಣೆಯ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿ ಬಿರಿಯಾನಿ ಹಂಚಿಕೆ ಮಾಡದಂತೆ ತಡೆ ನೀಡಿದೆ. ಬಿರಿಯಾನಿ ವಿತರಿಸಿದಲ್ಲಿ ಚುನಾವಣಾ ವೆಚ್ಚಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದು, ಹೀಗಾಗಿ ಬಿರಿಯಾನಿ ತಯಾರಿಸುವುದನ್ನು ನಿಲ್ಲಿಸಲಾಗಿದೆ. ಕಾದು ಸುಸ್ತಾದ ಕಾರ್ಯಕರ್ತರು ಅಲ್ಲಿಂದ ತೆರಳಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular