ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರ.ಸಂ. (2) ರಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Frescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ, ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ , denne a (Prescription) Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಿದೆ ಹಾಗೂ ಜನರಿಕ್ ಔಷಧಿಗಳು, ಬ್ರಾಂಡೆಡ್ ಔಷಧಿಯಷ್ಯ ಉತ್ತಮ ಗುಣಮಟ್ಟ, ರೋಗನಿವಾರಕ ಸಾಮರ್ಥ್ಯ ಹೊಂದಿರುತ್ತದೆ .
ಆರೋಗ್ಯ, ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಏಕ ಕಡತದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿರುತ್ತದೆ ಅರ್ಜಿದಾರರು ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ ಅರ್ಜಿಯನ್ನು ARS ಮುಂದೆ ಮಂಡಿಸಿ ಅದರ ಅನುಮೋದನೆಯ ನಂತರ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ, ಸರ್ಕಾರದಿಂದ ಅನುಮೋದನೆ ಆದ ನಂತರ ಅರ್ಜಿದಾರರಿಗೆ ಅನುಮತಿ ನೀಡಲಾಗುತ್ತದೆ. ಆದುದರಿಂದ, ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿರುತ್ತದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ಆದೇಶಿಸಿದೆ., ಸರ್ಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರದ ಕಾರಣ ಮುಂದುವರಿಯಬಹುದಾಗಿದೆ.
ಮುಂದುವರೆದು,ಪ್ರಸ್ತುತ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷದಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ (MOU) ಪಕಾರ ಸ್ಥಗಿತಗೊಳಿಸಲು ಅಗತ್ಯ ಕ್ರಮವಹಿಸತಕ್ಕದ್ದು.
ಹಾಗೆಯೇ, ಜೆನೆರಿಕ್ ಔಷಧಿಗಳ ಖರೀದಿಗೆ ಬಿ.ಪಿ.ಪಿ.ಐ ಯೊಂದಿಗೆ ಕೆ.ಎಸ್.ಎಂ.ಎಸ್.ಸಿ.ಎಲ್ ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ, ಆಸ್ಪತ್ರೆಗಳು ಬಿ.ಪಿ.ಪಿ.ಐ (BPPI) ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮವಹಿಸಕ್ಕದ್ದು ಎಂದು ಸೂಚಿಸಿದೆ.


